ಮಹಾಲಿಂಗಪುರ : ಜುಲೈ 24: ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಕೇಂದ್ರ ಕಚೇರಿಯಲ್ಲಿ 2026ರ ಜುಲೈ 25ರಂದು (ಶನಿವಾರ) ಸಂಜೆ 5.15 ಗಂಟೆಗೆ “ರಾಷ್ಟ್ರೀಯ ಕೈಮಗ್ಗ ದಿನಾಚರಣೆ” ಆಚರಣೆಯ ಪೂರ್ವಭಾವಿ ಸಿದ್ಧತೆಗಳ ಕುರಿತು ವಿಶೇಷ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಗೆ ಮಹಾಲಿಂಗಪುರ, ರಬಕವಿ, ರಾಂಪುರ, ಹೊಸೂರು, ಬನಹಟ್ಟಿ, ಹುನ್ನೂರು, ಆಸಂಗಿ, ತೆರದಾಳ, ಚಿಮ್ಮಡ ಹಾಗೂ ಬೆಳಗಲಿ ಭಾಗಗಳ ಎಲ್ಲ ವೃತ್ತಿಪರ ನೇಕಾರರು, ಕೈಮಗ್ಗ ನೇಕಾರರು ಹಾಗೂ ನೇಕಾರ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಶಿವಲಿಂಗ ಟಿರ್ಕಿ ಮನವಿ ಮಾಡಿದ್ದಾರೆ.ಸಭೆಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಿಸುವ ಕುರಿತು ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಆದ್ದರಿಂದ ಸಂಬಂಧಪಟ್ಟ ಎಲ್ಲ ನೇಕಾರ ಬಂಧುಗಳು ತಪ್ಪದೆ ಸಭೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

