ಬನಹಟ್ಟಿಯಲ್ಲಿ ನಾಳೆ ಎನ್ಎಸ್ಯುಐ ವತಿಯಿಂದ ಬೃಹತ್ ಪ್ರತಿಭಟನೆ :
ಬನಹಟ್ಟಿ, ಜುಲೈ 21: ಎನ್ಎಸ್ಯುಐ ತೇರದಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ, ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ವಿರುದ್ಧ ಧ್ವನಿ ಎತ್ತಿದವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಪ್ರತಿಭಟನೆ ಬೆಳಿಗ್ಗೆ 10 ಗಂಟೆಗೆ ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ನಡೆಯಲಿದ್ದು, ಎನ್ಎಸ್ಯುಐ ಪದಾಧಿಕಾರಿಗಳು, ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

