ರಬಕವಿ-ಬನಹಟ್ಟಿ
: ಶಿಕ್ಷಣ ಕ್ಷೇತ್ರದಲ್ಲಿ 15 ವರ್ಷಗಳ ಕಾಲ ಮುಖ್ಯ ಗುರುಗಳಾಗಿ ಸಲ್ಲಿಸಿದ ಸೇವೆ ಹಾಗೂ ಸಾಮಾಜಿಕ ಮತ್ತು ಜನಪರ ಕಾರ್ಯಗಳನ್ನು ಗುರುತಿಸಿ, ಶ್ರೀ ಎಚ್. ಬಾಗೇನವರ್ ಅವರಿಗೆ ಕರ್ನಾಟಕ ರಾಜ್ಯ ಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಟೌನ್ ಹಾಲ್ನಲ್ಲಿ ಸೆ. 20ರಂದು ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಪ್ರೆಸ್ ಕ್ಲಬ್, ಬೆಂಗಳೂರು ವತಿಯಿಂದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಶ್ರೀ ಎಚ್. ಬಾಗೇನವರ್ ಅವರು ರಾಮಪುರದ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಶ್ರೀ ಬಿ.ಕೆ. ಜೋತಾವರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾಗಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಜನಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಸ್ವೀಕರಿಸಿದ ಬಾಗೇನವರ್ ಅವರು ಮಾತನಾಡಿ, “ಈ ಗೌರವವು ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆ ನೀಡಿದೆ. ಮುಂದಿನ ದಿನಗಳಲ್ಲಿಯೂ ಸಮಾಜ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ” ಎಂದು ಹೇಳಿದರು.
ಇವರು ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ತಾಲೂಕು ಘಟಕ, ರಬಕವಿ-ಬನಹಟ್ಟಿ ಇದರ ಅಧ್ಯಕ್ಷರಾಗಿದ್ದು, ಶಿಕ್ಷಕರ ಸಂಘಗಳ ಪರಿಷತ್ತು, ಬೆಂಗಳೂರು ತಾಲೂಕು ಘಟಕ, ರಬಕವಿ-ಬನಹಟ್ಟಿ ಇದರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಚಿತ್ರ: ಬೆಂಗಳೂರಿನ ಟೌನ್ ಹಾಲ್ನಲ್ಲಿ ‘ಕರ್ನಾಟಕ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಚ್. ಬಾಗೇನವರ್.

